ದಾವಣಗೆರೆ: ಸನ್ಮಾನ ಸಮಾರಂಭ
Update: 2017-07-23 18:16 IST
ದಾವಣಗೆರೆ, ಜು.23: ನಗರದ ಕಮ್ಮಾವರಿ ಸಮುದಾಯ ಭವನದಲ್ಲಿ ಭಾನುವಾರ ಬಿಳಸನೂರಿನ ಶ್ರೀವೆಂಕಟೇಶ್ವರ ಕ್ಷೇಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸನ್ಮಾನ ಸಮಾರಂಭವನ್ನು ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ , ಕೆ.ಸಿ. ರೆಡ್ಡಿ ವೆಲ್ಫೇರ್ ಫೌಂಡೇಷನ್ ಅಧ್ಯಕ್ಷೆ ವಸಂತ ಕವಿತ , ಶ್ರೀವೆಂಕಟೇಶ್ವರ ಕ್ಷೇಮಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಸಪ್ಪರೆಡ್ಡಿ, ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘದ ಸಂರಕ್ಷಕ್ ಕೃ. ನರಹರಿ, ಜಿಪಂ ಮಾಜಿ ಅಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಮೇಯರ್ ಅಶ್ವಿನಿ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ, ರಮೇಶ್ ರೆಡ್ಡಿ, ವಿನಯ್ ಪಾಟೀಲ್ ಮತ್ತಿತರರಿದ್ದರು.