ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸರ್ವೆ ಕಾರ್ಯ
Update: 2017-07-23 19:41 IST
ಬೆಳ್ತಂಗಡಿ,ಜು.23: ಸವಣಲು ಗ್ರಾಮದ ಕುದುರೇಮುಖ ರಾಷ್ಟ್ರೀಯ ಉಧ್ಯಾನವನದ ಒಳಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆಯ ಅಡಿಯಲ್ಲಿ ಅನುಮತಿ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯತು ವತಿಯಿಂದ ಸರ್ವೆಕಾರ್ಯ ನಡೆಯಿತು, ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಾಗಿದ್ದು ಅರಣ್ಯ ಹಕ್ಕು ಕಾಯ್ದೆಯ ಅಡಿಯಲ್ಲಿ ಅವಕಾಶ ಪಡೆಯಲು ಪ್ರಯತ್ನಿಸುತ್ತಿದ್ದರು, ಇದೀಗ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.