×
Ad

ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕಲಾ ತರಬೇತಿ ಉದ್ಘಾಟನೆ

Update: 2017-07-23 20:38 IST

ಉಡುಪಿ, ಜು.23: ಆತ್ಮರಕ್ಷಣಾ ಕಲೆಗಳನ್ನು ಕಲಿತುಕೊಳ್ಳುವುದರ ಜೊತೆಗೆ ಅದನ್ನು ಯಾವ ಸಂದರ್ಭದಲ್ಲಿ ಯಾವ ರೀತಿ ಪ್ರಯೋಗಿಸಬೇಕೆಂಬುವುದನ್ನು ತಿಳಿದುಕೊಳ್ಳುವುದು ಮುಖ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

 ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ವಿಭಾಗ, ಪರ್ಕಳ ಲಯನ್ಸ್ ಕ್ಲಬ್ ಹಾಗೂ ಉಡುಪಿಯ ಉಜ್ವಲ್ ಡೆವಲಪರ್ಸ್‌ನ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಶನಿವಾರ ಆಯೋಜಿಸಲಾದ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕಲಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತ ನಾಡುತಿದ್ದರು.

ಯಾವುದೇ ಕಲಿಕೆಯನ್ನು ಪ್ರಸ್ತುತ ಪಡಿಸಬೇಕಾದರೆ ಏಕಾಗ್ರತೆ ಹಾಗೂ ಆ ಕಲೆಯ ಬಗೆಗಿನ ಅರಿವು ಅಗತ್ಯ. ಏಕಾಗ್ರತೆಯಿಂದ ವಿದ್ಯಾಭ್ಯಾಸವನ್ನು ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಸಾಧ್ಯ. ಏಕಾಗ್ರತೆ ಸಾಧಿಸಬೇಕಾದರೆ ಅದಕ್ಕೆ ಬೇಕಾದ್ಮ ಪರಿಸರ ಮುಖ್ಯ. ಆದುದರಿಂದ ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿ ಇಡಬೇಕು ಎಂದರು.

ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವುದು ಮಾತ್ರವಲ್ಲದೆ, ಕಸದ ಉತ್ಪಾದನೆ ಯನ್ನು ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಹಸಿರು ಶಿಷ್ಟಾಚಾರ ಎಂಬ ನೂತನ ಅಭಿಯಾನವನ್ನು ಜಿಲ್ಲೆಯಾದ್ಯಂತ ಆರಂಭಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದ್ದು, ಅವರ ಮೂಲಕ ಸಮಾಜದಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಲಾಗುವುದು ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ರಾವ್, ಲಯನ್ಸ್ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ, ಪರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಯು.ಹರೀಶ್, ಆತ್ಮರಕ್ಷಣಾ ಕಲಾ ತರಬೇತುದಾರ ಕಾರ್ತಿಕ್ ಎಸ್. ಕಟೀಲ್, ಭಾರತಿ ಹರೀಶ್ ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ.ರಾಮರಾಯ ಆಚಾರ್ಯ ವಂದಿಸಿದರು. ಪ್ರೊ.ಪ್ರಕಾಶ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿದರು.

ತ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಇಂದು ದೇಶದಲ್ಲಿ ಬಹಳ ದೊಡ್ಡ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿ ಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೋಟ್ಯಾಂತರ ರೂ. ಹಣವನ್ನು ವ್ಯಯಿಸುತ್ತಿದೆ. ಈ ನಿಟ್ಟಿನಲ್ಲಿ ವಸ್ತುಗಳ ಮರುಬಳಕೆಗೆ ಹೆಚ್ಚಿನ ಆದ್ಯತೆ ನೀಡ ಬೇಕು. ಇದರಿಂದ ಕಸದ ಉತ್ಪತ್ತಿಯನ್ನು ಕಡಿಮೆ ಮಾಡಬಹುದು. ಪ್ಲಾಸ್ಟಿಕ್‌ಗೆ ಪರ್ಯಾಯವಾಗಿರುವ ವಸ್ತುಗಳನ್ನು ಹೆಚ್ಚು ಬಳಸಬೇಕು. ಇದರಿಂದ ತ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News