×
Ad

ಆಟೊ ಚಾಲಕನ ಕೊಲೆ

Update: 2017-07-24 18:18 IST

ಬೆಂಗಳೂರು, ಜು.24: ಮದ್ಯದ ಅಮಲಿನಲ್ಲಿ ಜಗಳ ನಡೆದು ಆಟೊ ಚಾಲಕನೊಬ್ಬನನ್ನು ಕೊಲೆಗೈದಿರುವ ದುರ್ಘಟನೆ ಇಲ್ಲಿನ ಅನ್ನಪೂರ್ಣೆಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಾಳಗಾಳ ಮುಖ್ಯರಸ್ತೆಯ ನಿವಾಸಿ ರವಿ(25) ಮೃತಪಟ್ಟಿದ್ದು, ಈತ ಮಂಡ್ಯ ಮೂಲದವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರವಿವಾರ ರಾತ್ರಿ ಸ್ನೇಹಿತನ ಮನೆಗೆ ಹೋಗಿದ್ದು, ಮದ್ಯ ಸೇವನೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಜಗಳವಾಡಿಕೊಂಡು ಮದ್ಯದ ಅಮಲಿನಲ್ಲಿ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ದುಷ್ಕರ್ಮಿಗಳು ಪರಾರಿಯಾಗಿರುವುದಾಗಿ ಮೂಲಗಳು ತಿಳಿಸಿವೆ.

ಸೋಮವಾರ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದ್ದು, ಕೊಲೆ ಪ್ರಕರಣಕ್ಕೆ ಕಾರಣ ತಿಳಿದುಬಂದಿಲ್ಲ. ರವಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಅನ್ನಪೂರ್ಣೆಶ್ವರಿ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News