ಜಂತಕಲ್ ಗಣಿ ಗುತ್ತಿಗೆ ಪ್ರಕರಣ: ಮಾಜಿ ಮುಖ್ಯಮಂತ್ರಿಗೆ ನೋಟಿಸ್
Update: 2017-07-24 18:26 IST
ಬೆಂಗಳೂರು, ಜು.24: ಜಂತಕಲ್ ಗಣಿ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ಜಾರಿ ಮಾಡಿದೆ.
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರ ಪುತ್ರ ಅಜಯ್ ಸಿಂಗ್ ಸೋಮವಾರ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದರು ಎಂದು ತಿಳಿದುಬಂದಿದೆ. ಜು.30ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಧರ್ಮಸಿಂಗ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.