ಮಡಿಕೇರಿ: ನಾಳೆ ಮಾಹಿತಿ ಕಾರ್ಯಾಗಾರ
Update: 2017-07-24 19:31 IST
ಮಡಿಕೇರಿ, ಜು.24: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಜನಾಂಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಜನಾಂಗಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರೆ ಇಲಾಖಾ ಸೌಲಭ್ಯಗಳನ್ನು ಅನುಷ್ಠಾನಗೊಳಿಸುತ್ತಿದ್ದು, ವಿದ್ಯಾರ್ಥಿ ವೇತನ ಮತ್ತು ಇಲಾಖಾ ಸೌಲಭ್ಯಗಳ ಮಾಹಿತಿ ಕುರಿತು ಒಂದು ದಿನದ ತಾಲ್ಲೂಕು ಮಟ್ಟದ ಮಾಹಿತಿ ಕಾರ್ಯಾಗಾರವು ಜುಲೈ, 25 ರಂದು ಬೆಳಗ್ಗೆ 11.30 ಗಂಟೆಗೆ ಮೂರ್ನಾಡು ಶಾದಿ ಮಹಲ್‌ನಲ್ಲಿ ನಡೆಯಲಿದೆ.
ಈ ಕಾರ್ಯಾಗಾರಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿ ವೇತನ ಮತ್ತು ಇತರೆ ಇಲಾಖಾ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ.ಸುರೇಶ್ ಅವರು ತಿಳಿಸಿದ್ದಾರೆ.