ಪೊಲೀಸ್ ದೂರು ಪ್ರಾಧಿಕಾರದ ಮಾಹಿತಿ ಕಾರ್ಯಕ್ರಮ
ಮಡಿಕೇರಿ, ಜು.24: ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜು.25 ರಂದು ಬೆಳಗ್ಗೆ 10 ಗಂಟೆಗೆ ನಗರದ ನ್ಯಾಯಾಲಯ ಆವರಣದಲ್ಲಿ ಪೊಲೀಸ್ ದೂರು ಪ್ರಾಧಿಕಾರ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ಗೌರವಾನ್ವಿತ ನ್ಯಾಯಮೂರ್ತಿ ಎ.ಎಸ್.ಪಚ್ಚಾಪುರೆ, ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯರಾದ ಎಂ.ಆರ್.ಕಾಂಬ್ಳೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಆರ್‌ಕೆಜಿಎಂಎಂ ಮಹಾಸ್ವಾಮೀಜಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯವರಾದ ಪಿ.ರಾಜೇಂದ್ರ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೊೀಸೆಪ್ ಇತರರು ಪಾಲ್ಗೊಳ್ಳಲಿದ್ದಾರೆ.