ಹಲ್ಲೆ ಆರೋಪಿಗೆ ಜೈಲು ಶಿಕ್ಷೆ
ಚಿಕ್ಕಮಗಳೂರು, ಜು.24: ಹಲ್ಲೆಮಾಡಿದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನಗರದ 1 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯವು ತೀರ್ಪು ನೀಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ನರಗನ ಹಳ್ಳಿಯ ಆರೋಪಿ ಚಂದನ್ ಎಂಬಾತನು ಆಶಾ ಎಂಬ ಯುವತಿಯನ್ನು ಮದುವೆಯಾಗಿದ್ದ. ನಂತರ ನಿಮ್ಮ ತಂದೆ ತಾಯಿಯನ್ನು ಮನೆಗೆ ಕರೆದುಕೊಂಡು ಬರುವಂತೆ ತಿಳಿಸಿದ್ದ. ಅದರಂತೆ ಆಶಾ ತನ್ನ ತಂದೆ ಮಂಜೇಗೌಡ ಹಾಗೂ ಇತರರೊಂದಿಗೆ ಚಂದನ್ ಮನೆಗೆ ಹೋದಾಗ ಚಂದನ್‌ನ ತಾಯಿ ಚಂದ್ರಮ್ಮ ಹಾಗೂ ಅಣ್ಣ ಚೇತನ್ ಇಬ್ಬರೂ ಅವರುಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಕೈ ಹಾಗೂ ದೊಣ್ಣೆಯಿಂದ ಹೊಡೆದು ಗಾಯಾಗೊಳಿಸಿದ್ದರು.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಠಾಣೆ ಪೊಲೀಸ್‌ರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮಹೆಗಡೆ ರವರು ಆರೋಪಿ ಚಂದನ್, ಚೇತನ್ ಹಾಗೂ ಚಂದ್ರಮ್ಮಗೆ 3 ತಿಂಗಳು ಜೈಲು ಶಿಕ್ಷೆ ಹಾಗೂ ರೂ. 6000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಘವೇಂದ್ರ ರಾಯ್ಕರ್.ವಿ ಮೊಕದ್ದಮೆಯನ್ನು ನಡೆಸಿದ್ದರು.