×
Ad

ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Update: 2017-07-24 21:12 IST

ಬೆಂಗಳೂರು, ಜು.24: ಸಾರ್ವಜನಿಕರ ಕಾರ್ಯಕ್ರಮವೊಂದರಲ್ಲಿ ಬಿಬಿಎಂಪಿ ಸದಸ್ಯ ಎನ್.ಆರ್.ರಮೇಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಗರದ 3ನೆ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಈ ಸಂಬಂಧ ಬಿಬಿಎಂಪಿ ಸದಸ್ಯ ಎನ್.ಆರ್.ರಮೇಶ್ ದೂರು ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಘನತೆಯನ್ನು ಮರೆತು, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎನ್.ಆರ್.ರಮೇಶ್ ಒಬ್ಬ ಮನೆ ಹಾಳ ಎಂದು ಅವಾಚ್ಯ-ಅಸಂವಿಧಾನಿಕ ಪದಗಳಿಂದ ನಿಂದಿಸಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಗಳನ್ವಯ ನಗರದ ಮೂರನೆ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News