ವಿಎಚ್‌ಪಿ ಮುಖಂಡ ಪ್ರವೀಣ್ ಖಾಂಡ್ಯಗೆ ಸುಪ್ರೀಂ ನೋಟಿಸ್
ಬೆಂಗಳೂರು, ಜು.24: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ಖಾಂಡ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
ಕಲ್ಲಪ್ಪಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರವೀಣ್ ಖಾಂಡ್ಯಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಪ್ರವೀಣ್ ಖಾಂಡ್ಯಗೆ ನೋಟಿಸ್ ಜಾರಿ ಮಾಡಿದೆ.
ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರವೀಣ್ ಮುಖ್ಯ ಆರೋಪಿ. ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಪ್ರಕರಣ ಏನು: ಪ್ರವೀಣ್ ಖಾಂಡ್ಯ ಒಬ್ಬ ಯುವಕನನ್ನು ಅಪಹರಿಸಿದ್ದ. ಇದಾದ ಬಳಿಕ ಈ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡ ಕಲ್ಲಪ್ಪ ಹಂಡಿಭಾಗ್ ಅವಮಾನ ತಾಳಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಪ್ರಮುಖ ಸಾಕ್ಷಿ. ವಿಚಾರಣೆಗೆ ಬಂಧಿಸಲು ಯತ್ನಿಸಿದ ಪೊಲೀಸರಿಂದ ಆತ ತಲೆಮರೆಸಿಕೊಂಡಿದ್ದ. ಇದಾದ ಮೇಲೆ ಹೈಕೋರ್ಟ್ ಜಾಮೀನು ಕೂಡ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ಇದೀಗ ಪೊಲೀಸರ ಎದುರು ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದೀಗ ವಿಚಾರಣೆಗಾಗಿ ಪೊಲೀಸರಿಗೆ ಅವಕಾಶ ಸಿಕ್ಕಿದೆ. ಯಾವುದೇ ಸಂದರ್ಭದಲ್ಲಿ ತಲೆಮರೆಸಿಕೊಂಡಿರುವ ಪ್ರವೀಣ್ ಖಾಂಡ್ಯನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಇದರಿಂದ ಸಾಕಷ್ಟು ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.