ರಾಹುಲ್‌ಗೆ ಜ್ವರ, ಮೊದಲ ಟೆಸ್ಟ್ ಗೆ ಅಲಭ್ಯ

Update: 2017-07-24 18:36 GMT

ಗಾಲೆ, ಜು.24: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿ ಶ್ರೀಲಂಕಾ ವಿರುದ್ಧ ಆರಂಭವಾಗಲಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

  ‘‘ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ತಂಡ ದೃಢಪಡಿಸಿದೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದು, ವೈದ್ಯಕೀಯ ತಂಡ ರಾಹುಲ್ ಆರೋಗ್ಯದ ಬಗ್ಗೆ ತೃಪ್ತಿವ್ಯಕ್ತಪಡಿಸಿದೆ’’ ಎಂದು ಬಿಸಿಸಿಐ ಹೇಳಿಕೆಯೊಂದರಲ್ಲಿ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಹುಲ್‌ಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ಜು.26 ರಂದು ಗಾಲೆಯಲ್ಲಿ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರಾಹುಲ್ ಲಭ್ಯವಿರುವುದಿಲ್ಲ. ವೈದ್ಯಕೀಯ ತಂಡ ರಾಹುಲ್‌ರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎಂದು ಬಿಸಿಸಿಐ ತಿಳಿಸಿದೆ. ಕರ್ನಾಟಕದ ಬ್ಯಾಟ್ಸ್‌ಮನ್ ರಾಹುಲ್ ಅನುಪಸ್ಥಿತಿಯಲ್ಲಿ ತಮಿಳುನಾಡಿನ ಆರಂಭಿಕ ಆಟಗಾರ ಅಭಿನವ್ ಮುಕುಂದ್ ದಿಲ್ಲಿಯ ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್‌ರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ. ಮುಕುಂದ್ ಅವರು ತಮ್ಮದೇ ರಾಜ್ಯದ ಮುರಳಿ ವಿಜಯ್ ಬದಲಿಗೆ ದ್ವೀಪರಾಷ್ಟ್ರಕ್ಕೆ ತಂಡದೊಂದಿಗೆ ತೆರಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News