×
Ad

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

Update: 2017-07-25 14:56 IST

ಕಾಸರಗೋಡು, ಜು. 25:  ವಿದಾರ್ಥಿಗಳನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟಕ್ಕೆ ಯತ್ನಿಸಿದ  ಇಬ್ಬರನ್ನು  ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು  ನೀರ್ಚಾಲ್ ಚೌಕಿಯ   ಫರ್ ಮಿಷಾನ್ (22) ಮತ್ತು ಉಳಿಯತ್ತಡ್ಕ  ಬದರ್ ನಗರದ ಆಹಮ್ಮದ್ ಮುಸಮ್ಮಿಲ್ ( 20) ಎಂದು ಗುರುತಿಸಲಾಗಿದೆ. ಇವರಿಂದ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬದರ್ ನಗರ ಸಮೀಪ ಅಲೆದಾಡುತ್ತಿದ್ದ ಇವರನ್ನು ಪೊಲೀಸರು  ವಶಕ್ಕೆ ತೆಗೆದುಕೊಂಡು ವಿಚಾರಿಸಿದಾಗ ಗಾಂಜಾ ಪತ್ತೆಯಾಗಿದೆ.   ಯುವಕರು ಮತ್ತು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News