‘ಪ್ರಕೃತಿಯಲ್ಲಿನ ಆಹಾರ ಸೇವಿಸಿದರೆ ಆರೋಗ್ಯವಂತರಾಗಲು ಸಾಧ್ಯ’ : ಪ್ರವೀಣ್ ನಾಯಕ್

Update: 2017-07-25 13:42 GMT

ಉಡುಪಿ, ಜು.25: ಕರಾವಳಿ ಜಿಲ್ಲೆಯು ಭಾಷಾ ವೈವಿಧ್ಯತೆಯಿಂದ ಕೂಡಿದ ಪ್ರದೇಶವಾಗಿದೆ. ಇಲ್ಲಿನ ಆಚಾರ ವಿಚಾರ ಅದ್ಭುತ. ಇಲ್ಲಿನ ಹಿರಿಯರು ಪ್ರಕೃತಿ ಯಲ್ಲಿ ಬೆಳೆದ ಆಹಾರಗಳನ್ನು ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುತ್ತಿದ್ದರು. ಈ ವಿಚಾರಗಳನ್ನು ನಮ್ಮ ಮುಂದಿನ ಪೀಳಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಉಡುಪಿ ಜಿಲ್ಲಾ ಸಹಕಾರಿ ಇಲಾಖೆಯ ಉಪನಿಬಂಧಕ ಪ್ರವೀಣ್ ನಾಯಕ್ ಹೇಳಿದ್ದಾರೆ.

ಉಡುಪಿ ಮಹಿಳಾ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಂಗಳವಾರ ಸಂಘದ ಸಭಾಭವನದಲ್ಲಿ ಆಯೋಜಿಸಲಾದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ದೇವರಾಜ್‌ಮೂರ್ತಿ ಕೊಡಂ ಕೂರು, ಉದ್ಯಾವರ ಎಸ್‌ಡಿಎಂ ಕಾಲೇಜಿನ ಸಂಶೋಧನ ಕೇಂದ್ರದ ಹಿರಿಯ ಸಂಶೋಧಕ ನವೀನ್‌ಚಂದ್ರ ಭಂಡಾರಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ವಹಿಸಿದ್ದರು.

ಲವಿಟಾ ಸ್ವಾಗತಿಸಿದರು. ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಮಹೇಶ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರಿಜಾ ಶಿವರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News