×
Ad

ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Update: 2017-07-25 21:37 IST

ಉಡುಪಿ, ಜು.25: ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತ ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕಾನೂನು ಪಧವೀಧರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತುತಿ 3ಬಿ ಗಳಿಗೆ ಸೇರಿದವರಾಗಿರಬೇಕು. ಅ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನದಿಂದ ಹಿಂದಿನ ಎರಡು ವರ್ಷಗಳ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರಬೇಕು. 38 ವರ್ಷಗಳ ವಯೋಮಿತಿಯಲ್ಲಿದ್ದು, ತಮ್ಮ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿರಬೇಕು.

ತರಬೇತಿಗೆ ಆಯ್ಕೆಯಾಗುವ ಅ್ಯರ್ಥಿಗಳಿಗೆ ಅನುವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳ ವರೆಗೆ ತಿಂಗಳಿಗೆ 4,000ರೂ. ಶಿಷ್ಯವೇತನ ನೀಡಲಾಗುವುದು.

ಆಸಕ್ತ ಅ್ಯರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಎಲ್ಲಾ ಪ್ರಮಾಣ ಪತ್ರ, ದಾಖಲೆಗಳೊಂದಿಗೆ ಆ.14ರೊಳಗೆ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಬಿ ಬ್ಲಾಕ್ ಎರಡನೇ ಮಹಡಿ, ಕೊಠಡಿ ಸಂಖ್ಯೆ: 304, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 0820-2574881ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News