ಕೇಂದ್ರ ಸರಕಾರ ವರದಿ ಕೇಳಿಲ್ಲ: ಸುಭಾಷ್‌ಚಂದ್ರ ಕುಂಟಿಯಾ

Update: 2017-07-25 16:23 GMT

ಬೆಂಗಳೂರು, ಜು.25: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಯಾವುದೆ ವರದಿಯನ್ನು ಕೇಳಿಲ್ಲ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್‌ಚಂದ್ರ ಕುಂಟಿಯಾ ಸ್ಪಷ್ಟಪಡಿಸಿದ್ದಾರೆ.

ಬಂಟ್ವಾಳದಲ್ಲಿ ನಡೆದ ಗಲಭೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ರಾಜಕೀಯ ಪಕ್ಷಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸುವಂತೆ ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರ ಪತ್ರ ಬರೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಅವರು ಈ ಮೇಲಿನಂತೆ ಸ್ಪಷ್ಟೀಕರಣ ನೀಡಿದ್ದಾರೆ.

 ರಾಜಕೀಯ ಪಕ್ಷಗಳ ಕಾರ್ಯಕರ್ತರ ಹತ್ಯೆ ನಡೆಯಲು ಪ್ರಮುಖ ಕಾರಣಗಳೇನು, ಬಂಟ್ವಾಳದಲ್ಲಿ ನಡೆದ ಗಲಭೆಯ ಹಿಂದೆ ಯಾರ ಕೈವಾಡವಿದೆ, ಈ ರೀತಿಯ ಘಟನೆಗಳನ್ನು ತಡೆಯಲು ಸರಕಾರ ಕೈಗೊಂಡ ಕ್ರಮಗಳೇನು ಎಂಬುದರ ಸಂಪೂರ್ಣ ವಿವರಗಳನ್ನು ಒಳಗೊಂಡ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News