ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
Update: 2017-07-26 18:55 IST
ಪಾಟ್ನಾ, ಜು.26: ಬಿಹಾರದ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಬುಧವಾರ ಸಂಜೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ತ್ರಿಪಾಠಿ ಅವರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು.
ಉಪಮುಖ್ಯ ಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ತಾನು ರಾಜೀನಾಮೆ ನೀಡಿರುವುದಾಗಿ ನಿತೀಶ್ ಕುಮಾರ್ ತನ್ನ ರಾಜೀನಾಮೆಗೆ ಕಾರಣ ನೀಡಿದ್ದಾರೆ.
ರಾಜ್ಯದ ಹಿತಾಸಕ್ತಿಯಿಂದ ನಾನು ರಾಜೀನಾಮೇ ಸಲ್ಲಿಸುತ್ತಿದ್ದೇನೆ. ರಾಜಿನಾಮೆಯ ಹೊರತು ನನ್ನ ಬಳಿ ಬೇರೆ ಆಯ್ಕೆಗಳಿಲ್ಲ. ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ.