×
Ad

ಡಿಐಜಿ ಡಿ.ರೂಪಾಗೆ ಲೀಗಲ್ ನೋಟಿಸ್

Update: 2017-07-26 19:56 IST

ಬೆಂಗಳೂರು, ಜು.26: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಕೋಟಿ ರೂ.ಲಂಚ ಪಡೆದು ವಿ.ಕೆ.ಶಶಿಕಲಾಗೆ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ ಎಂದು ಆರೋಪಿಸಿದ್ದ ಬಂದಿಖಾನೆ ಡಿಐಜಿಯಾಗಿದ್ದ ಡಿ.ರೂಪಾ ಅವರಿಗೆ ಡಿಜಿಪಿ ಸತ್ಯನಾರಾಯಣ್‌ರಾವ್ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.

ಬುಧವಾರ ಹಿರಿಯ ವಕೀಲ ಪುತ್ತಿಗೆ ಆರ್.ರಮೇಶ್ ಅವರ ಮೂಲಕ ರೂಪಾ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದು, ಸತ್ಯನಾರಾಯಣ್‌ರಾವ್ 2 ಕೋಟಿ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ಅವರಿಗೆ ವಿಶೇಷ ಸವಲತ್ತುಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಡಿ.ರೂಪಾ ಅವರು ಸರಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಆಧಾರವಿಲ್ಲದೆ ಲಂಚ ಪಡೆದಿರುವುದಾಗಿ ಆರೋಪಿಸಿದ ಹಿನ್ನೆಲೆಯಲ್ಲಿ ಮೂರು ದಿನಗಳೊಳಗಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News