ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜು. 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2017-18ನೆ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
6ರಿಂದ 18 ವರ್ಷದೊಳಗಿನ ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಹಾಗೂ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನ.14 ರ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿಗೆ ಪರಿಗಣಿಸುವ ಪ್ರಕರಣ 2016ರ ಆಗಸ್ಟ್‌ನಿಂದ 2107ರ ಜುಲೈ ತಿಂಗಳೊಳಗೆ ನಡೆದಿರಬೇಕು. ಅರ್ಹ ಮಕ್ಕಳು ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ಆ.30ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಿ ಬ್ಲಾಕ್, ಕೊಠಡಿ ಸಂಖ್ಯೆ:204 ರಜತಾದ್ರಿ ಮಣಿಪಾಲ-576104 ಇವರಿಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಗಳು ಹಾಗೂ ಹೆಚ್ಚಿನ ವಿವರಗಳಿಗೆ ಮೇಲಿನ ವಿಳಾಸ ಅಥವಾ ದೂರವಾಣಿ ಸಂಖ್ಯೆ: 0820-2574978, 0820-2574972ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.