×
Ad

ವಿದ್ಯಾರ್ಥಿಗೆ ಥಳಿಸಿದ ಹಿಂದೂ ಯುವವಾಹಿನಿ ಕಾರ್ಯಕರ್ತರು

Update: 2017-07-26 21:27 IST

ಶಹಜಾನ್ಪುರ, ಜು.26: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಚಿತ್ರಕ್ಕೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಿ ಹಿಂದೂ ಯುವವಾಹಿನಿಯ ಕಾರ್ಯಕರ್ತರು ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಘಟನೆ ನಡೆದಿದೆ.

ಹಿಂದೂ ಯುವವಾಹಿನಿಯ ಕಾರ್ಯಕರ್ತರು ದೇವರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ಚಿತ್ರಕ್ಕೆ ವಿದ್ಯಾರ್ಥಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಎಂದು ಅಲ್ಲಾಹಾಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಅಶುತೋಷ್ ಸಿಂಗ್ ಹೇಳಿದ್ದಾರೆ.

ಮಾರುಕಟ್ಟೆಯೊಂದರಲ್ಲಿ ವಿದ್ಯಾರ್ಥಿಯನ್ನು ಸುತ್ತುವರಿದ ಹಿಂದೂ ಯುವವಾಹಿನಿ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News