ಅಧಿಕಾರಿಗಳ ಮನವಿ ತಿರಸ್ಕಾರ: ಕೆರೆಯಲ್ಲಿ ಧರಣಿ ಮುಂದುವರಿಕೆ
Update: 2017-07-26 22:28 IST
ಮದ್ದೂರು, ಜು.26: ತಮಿಳುನಾಡಿಗೆ ನೀರು ನಿಲ್ಲಿಸಿ ಕಾವೇರಿ ಕೊಳ್ಳದ ನಾಲೆಗಳಿಗೆ ಹರಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ತಾಲೂಕಿನ ದೇಶಹಳ್ಳಿ ಕೆರೆಯಲ್ಲಿ ನಡೆಯುತ್ತಿರುವ ಧರಣಿ ಮುಂದುವರಿದಿದೆ.
ಬುಧವಾರ ನಡೆದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ಹರ್ಷ ಜು.27 ರಂದು ಕೆರೆಯಂಗಳದಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನೆ ಹಿಂಪಡೆಯಬೇಕು ಎಂದು ಮನವಿ ಮಾಡಿದರು.
ಮೇಲಾಧಿಕಾರಿಗಳೊಂದಿಗೆ ಮಾತನಾಡಿ ನಾಲೆಗಳಿಗೆ ನೀರು ಬಿಡುಗಡೆಗೆ ಯತ್ನಿಸುವುದಾಗಿ ಭರವಸೆ ನೀಡಿದ ಅಧಿಕಾರಿಗಳ ಮನವಿಯನ್ನು ತಿರಸ್ಕರಿಸಿದ ಧರಣಿನಿರತರು, ಮೊದಲು ನಾಲೆಯಲ್ಲಿ ನೀರುಹರಿಸಿ, ನಂತರ ಧರಣಿ ಕೈಬಿಡುತ್ತೇವೆ ಎಂದರು.