ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ರಾಜಕೀಯ ಜೀವನದ ಅಪರೂಪದ ಚಿತ್ರಗಳು...

Update: 2017-07-27 11:32 GMT

ಹೃದಯಾಘಾತದಿಂದ ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ 2004ರಿಂದ 2006ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. 1936, ಡಿ.25ರಂದು ಜೀವರ್ಗಿ ತಾಲೂಕಿನ ನೆಲೋಗಿಯಲ್ಲಿ ಜನಿಸಿದ್ದ ಧರಂ ಸಿಂಗ್ 1978ರಲ್ಲಿ 2008ರತನಕ ಸತತ 7 ಬಾರಿ ಶಾಸಕರಾಗಿದ್ದರು. 1980ರಲ್ಲಿ ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ್ದರು. 2009ರಲ್ಲಿ ಬೀದರ್ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 2013ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ 2006-07ರ ತನಕ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ್ದರು.

ಧರಂ ಸಿಂಗ್ ಅವರ ರಾಜಕೀಯ ಜೀವನದ ಕೆಲ ಅಪರೂಪದ ಚಿತ್ರಗಳು ಇಲ್ಲಿವೆ..

1980ರಲ್ಲಿ ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರೊಂದಿಗೆ

--------------------

1977ರಲ್ಲಿ ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ

--------------------

1981 ರಲ್ಲಿ ಪ್ರಧಾನಿ ಇಂದಿರಾಗಾಂಧಿ ಅವರೊಂದಿಗೆ

--------------------

ಮೈಸೂರು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅಂದಿನ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್, ಸಿದ್ದಗಂಗಾ ಶ್ರೀಗಳು ಹಾಗೂ ತರಳುಬಾಳು ಸ್ವಾಮೀಜಿಯೊಂದಿಗೆ

--------------------

2004 ಮೇ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭ

--------------------

ಅಂದಿನ ಪ್ರಧಾನಿ ಮನ್‍ಮೋಹನ್‍ಸಿಂಗ್ ಅವರೊಂದಿಗೆ

--------------------

2005 ರಲ್ಲಿ ನವದೆಹಲಿಯಲ್ಲಿ ನಡೆದ ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ ಸಂದರ್ಭ

--------------------

ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ

--------------------

2004 ರಲ್ಲಿ ರಷ್ಯಾ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News