ಜಿಲ್ಲಾ ಕಾಂಗ್ರೆಸ್ ಸಂತಾಪ
Update: 2017-07-27 18:42 IST
ಮಡಿಕೇರಿ ಜು.27: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಎನ್.ಧರ್ಮಸಿಂಗ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವಿವಿಧ ಖಾತೆಗಳ ಸಚಿವರಾಗಿ, ಲೋಕಾಸಭಾ ಸದಸ್ಯರಾಗಿ ದುಡಿದ ಧೀಮಂತ ನಾಯಕ ಧರ್ಮಸಿಂಗ್ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕಳೆದ 40 ವರ್ಷಗಳಿಂದ ಕೊಡಗು ಜಿಲ್ಲೆಗೆ ಚಿರಪರಿಚಿತರಾಗಿದ್ದ ಹಿರಿಯ ರಾಜಕಾರಣಿಯ ಅಗಲಿಕೆ ತೀವ್ರ ನೋವನ್ನು ತಂದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಬಿ. ಶಿವು ಮಾದಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.