×
Ad

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಂತಾಪ ಸೂಚಕ ಸಭೆ

Update: 2017-07-27 18:58 IST

ಮಂಗಳೂರು, ಜು.27: ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನೇತಾರ ಧರಂ ಸಿಂಗ್‌ರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ಸಂತಾಪ ಸೂಚಕ ಸಭೆ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಧರಂ ಸಿಂಗ್ ರಾಜಕೀಯ ಆಜಾತಶತ್ರು. ಅವರ ಅಗಲಿಕೆಯು ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಕಾಂಗ್ರೆಸ್‌ಗರಿಗೆ ಮಾದರಿ ನಾಯಕ ಎಂದರು.

ರಾಜ್ಯ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಮೊಯ್ದಿನ್ ಬಾವಾ ಮಾತನಾಡಿದರು. ವೇದಿಕೆಯಲ್ಲಿ ಮೇಯರ್ ಕವಿತಾ ಸನಿಲ್, ಶಾಸಕ ಜೆ.ಆರ್.ಲೋಬೊ, ಉಪ ಮೇಯರ್ ರಜನೀಶ್, ಕೆಪಿಸಿಸಿ ಕಾರ್ಯದರ್ಶಿ ಮಮತಾ ಗಟ್ಟಿ, ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ಜೆ. ಅಬ್ದುಲ್ ಸಲೀಂ, ಸುರೇಂದ್ರ ಕಂಬಳಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ., ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ಕಾರ್ಪೋರೇಟರ್‌ಗಳಾದ ಆಶಾ ಡಿಸಿಲ್ವಾ, ಕವಿತಾ ವಾಸು, ಪ್ರವೀಣ್ ಚಂದ್ರ ಆಳ್ವ, ಎ.ಸಿ. ವಿನಯರಾಜ್, ಅಪ್ಪಿ, ಮಾಜಿ ಮೇಯರ್ ಹರಿನಾಥ್, ಟಿ.ಕೆ. ಶೈಲಜಾ, ಸ್ಟೀಫನ್ ಮರೋಳಿ, ರಮಾನಂದ ಪೂಜಾರಿ, ಝಾಕಿರ್ ಸೂರಲ್ಪಾಡಿ, ಜಯಶೀಲಾ ಅಡ್ಯಂತಾಯ, ಮೆಲ್ವಿನ್ ಡಿಸೋಜ, ಟಿ.ಕೆ.ಸುಧೀರ್, ಅನ್ಸಾರ್ ಸಾಲ್ಮರ, ಸುನೀಲ್ ಶೆಟ್ಟಿ ಮಂಗಳಾದೇವಿ, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News