ಸುಂದರ್ ಮಾಸ್ಟರ್ ಉಪಾಧ್ಯಕ್ಷರಾಗಿ ಆಯ್ಕೆ
Update: 2017-07-27 19:17 IST
ಉಡುಪಿ, ಜು.27: ಉಡುಪಿ, ದ.ಕ., ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯನ್ನೊಳಗೊಂಡ 13 ಶಾಖೆಗಳನ್ನು ಹೊಂದಿರುವ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ವಿಶೇಷ ಸಭೆಯಲ್ಲಿ ಉಪಾಧ್ಯಕ್ಷರಾಗಿ ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಂದರ್ ಮಾಸ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.