×
Ad

ಎನ್. ಧರಂಸಿಂಗ್ ನಿಧನಕ್ಕೆ ಸಚಿವರ ಸಂತಾಪ, ಮೌನಾಚರಣೆ

Update: 2017-07-27 19:53 IST

ಉಡುಪಿ, ಜು.27: ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎನ್. ಧರಂಸಿಂಗ್ ಅವರ ನಿಧನಕ್ಕೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಧರಂಸಿಂಗ್ ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ನೀಡಲಿ ಹಾಗೂ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ಪ್ರಮೋದ್ ತಿಳಿಸಿದ್ದಾರೆ.

ಬಿಜೆಪಿ ಸಂತಾಪ: ರಾಜ್ಯ ಕಂಡ ಹಿರಿಯ ವರ್ಚಸ್ವಿ ರಾಜಕಾರಿಣಿ, ರಾಜ್ಯದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ ಕಾಂಗ್ರೆಸ್‌ನ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೌನಾಚರಣೆ:ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ವಾರಾಹಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಧರಂ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತಿದ್ದಂತೆ ಸಂತಾಪ ಸೂಚಕವಾಗಿ ಒಂದು ನಿಮಿಷದ ವೌನಾಚರಣೆ ನಡೆಸಿ ಸೆಯನ್ನು ಮುಕ್ತಾಯಗೊಳಿಸಲಾಯಿತು.

ಅಪರಾಹ್ನ ನಡೆಯಬೇಕಿದ್ದ ಇನ್ನೊಂದು ಸಭೆಯನ್ನು ರದ್ದುಗೊಳಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News