ಈಶ್ವರಪ್ಪ ಆಪ್ತ ಸಹಾಯಕ ಅಪಹರಣ ಪ್ರಕರಣ: ಇಬ್ಬರು ವಶಕ್ಕೆ

Update: 2017-07-27 15:04 GMT

ಬೆಂಗಳೂರು, ಜು.27: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿವಾರೆಂಟ್ ಮೂಲಕ ಇಬ್ಬರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ನಿವಾಸಿಗಳಾದ ಪ್ರಶಾಂತ್, ಅರವಿಂದ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು 43ನೆ ಎಸಿಎಂಎಂ ನ್ಯಾಯಾಲಯದಿಂದ ಬಾಡಿ ವಾರೆಂಟ್ ಮೂಲಕ ಇಬ್ಬರನ್ನೂ ತಮ್ಮ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ.
ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಲವಾರು ಮಾಹಿತಿಗಳನ್ನು ನೀಡಿದ್ದಾರೆ ಎನ್ನಲಾಗಿದ್ದು, ಪ್ರಕರಣದಲ್ಲಿ ಈಗಾಗಲೇ 8 ಮಂದಿಯನ್ನು ಬಂಧಿಸಲಾಗಿದ್ದು, ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News