ಜೆಡಿಎಸ್ ಶಾಸಕನ ವಿರುದ್ಧ ಎಫ್‌ಐಆರ್

Update: 2017-07-27 16:26 GMT

ಬೆಂಗಳೂರು, ಜು.27: ರಾಜ್ಯಸಭಾ ಚುನಾವಣೆ ವೇಳೆ ಲಂಚದ ಬೇಡಿಕೆಯಿಟ್ಟಿದ ಆರೋಪದ ಮೇಲೆ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

 ಗುರುವಾರ ಚುನಾವಣಾ ಆಯೋಗದ ಸೂಚನೆಯಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ -1998, ಐಪಿಸಿ 171 ಬಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News