ಗುಜರಾತ್ ನಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ

Update: 2017-07-28 07:16 GMT

ಅಹ್ಮದಾಬಾದ್, ಜು.28: ಗುಜರಾತ್ ನ  ಇಬ್ಬರು ಶಾಸಕರು ಇಂದು ರಾಜೀನಾಮೆ

ನೀಡಿದ್ದಾರೆ. ಇದರೊಂದಿಗೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರ ಸಂಖ್ಯೆ ಐದಕ್ಕೇರಿದೆ.  ಗುರುವಾರ ಮೂವರು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಐವರು ಶಾಸಕರು ಕಾಂಗ್ರೆಸ್ ತೊರೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ರಾಜ್ಯಸಭಾ ಚುನಾವಣೆಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್  ಗುಜರಾತ್ ನಿಂದ ಮತ್ತೊಮ್ಮೆ ರಾಜ್ಯಸಭೆ ಪ್ರವೇಶಿಸಲು ಸಿದ್ಧತೆ  ನಡೆಸಿರುವಾಗಲೇ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಗೆ ಸಮಸ್ಯೆ ಎದುರಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News