ಪದತ್ಯಾಗ ಮಾಡಿದ ಪಾಕ್ ಪ್ರಧಾನಿ ಶರೀಫ್

Update: 2017-07-28 09:00 GMT

ಲಾಹೋರ್, ಜು.28: ಪಾಕ್ ಪ್ರಧಾನಿ ನವಾಝ್ ಶರೀಫ್ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶರೀಫ್ ದೋಷಿ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪದತ್ಯಾಗ ಮಾಡಿದ್ದಾರೆ.

ಶರೀಫ್ ನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿರುವ ನ್ಯಾಯಾಲಯ ಅವರ ವಿರುದ್ಧ ಕ್ರಿಮಿನೆಲ್ ಪ್ರಕರಣ ದಾಖಲಿಸಲು ಆದೇಶ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News