ರೌಡಿಶೀಟರ್ ನಾಗರಾಜ್ ಕೊಲೆ

Update: 2017-07-28 12:45 GMT

ಬೆಂಗಳೂರು, ಜು.28: ಮಾರಕಾಸ್ತ್ರಗಳಿಂದ ರೌಡಿಶೀಟರ್ ನಾಗರಾಜ್‌ನನ್ನು ಕೊಲೆಗೈದಿರುವ ಘಟನೆ ಇಲ್ಲಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಗರಾಜ್ ಯಾನೆ ಡಿಂಗ್ರಿ ನಾಗರಾಜ್ ಕೊಲೆಯಾಗಿದ್ದು, ತಾವರೆಕೆರೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ ಎಂದು ಹಿರಿಯ ಪೊಲೀಸ್‌ಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಾಗರಾಜ್ ನಗರದ ಹೊನ್ನಿಗನಹಟ್ಟಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಮತ್ತು ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಐದು ಮಂದಿ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ತಾವರೆಕೆರೆ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News