ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆರ್ಜಿ ಆಹ್ವಾನ

Update: 2017-07-28 14:13 GMT

ಭಟ್ಕಳ, ಜು.28: ಕೃಷಿ ಇಲಾಖೆಯ ಆತ್ಮಯೋಜನೆಯಡಿಯಲ್ಲಿ ಶ್ರೇಷ್ಟ ಕೃಷಿಕ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಭಟ್ಕಳ ತಾಲೂಕಿನ ರೈತರಿಂದ ಇಲಾಖೆ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್‌ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕೃಷಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ) ಕೃಷಿ ಸಂಸ್ಕರಣೆ, ಆಡು, ಕುರಿ, ಮೊಲ ಸಾಕಾಣಿಕೆ ಇತ್ಯಾದಿ ಇವುಗಳಲ್ಲಿ ಒಬ್ಬರು ಒಂದೇ ಚಟುವಟಿಕೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಗಳ ಕುರಿತು ಮಾಹಿತಿಯ ಪ್ರತಿಗಳು, ಪೋಟೋ, ಸಿ.ಡಿ., ಖರ್ಚು ವೆಚ್ಚಗಳ ಕುರಿತು ಮಾಹಿತಿ, ವರಮಾನ ಇತ್ಯಾದಿಗಳನ್ನು ತಿಳಿಸಬೇಕಾಗುವುದು. ಆಸಕ್ತ ರೈತರು ಸಹಾಯಕ ಕೃಷಿ ನಿರ್ದೇಶಕರು, ಭಟ್ಕಳ ಇವರಕಚೇರಿಯಲ್ಲಿ ನಿಗದಿತ ನಮೂನೆಯಅರ್ಜಿಯನ್ನು ಸ್ವೀಕರಿಸಿ, ಭರ್ತಿ ಮಾಡಿದ ಅರ್ಜಿಯನ್ನು ಅ.19ರ ಒಳಗಾಗಿ ಸಲ್ಲಿಸಬೇಕು ಎಂದೂ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News