ಶಾಸಕ ಹಾಲಾಡಿಗೆ ಮಾತೃವಿಯೋಗ

Update: 2017-07-28 14:52 GMT

ಕುಂದಾಪುರ, ಜು. 28: ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ತಾಯಿ ಹಾಗೂ ಹಾಲಾಡಿ ದಿ.ಮೋನಪ್ಪಶೆಟ್ಟಿ ಅವರ ಪತ್ನಿ ಪಳಜೆ ಗುಣರತ್ನಾ ಶೆಟ್ಟಿ (96) ಮಣಿಪಾಲ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಅವರು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಮೂವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ಬ್ರಹ್ಮಾವರದ ಮಾಜಿ ಶಾಸಕ ದಿ. ಆನಂದಕುಂದ ಹೆಗ್ಡೆ ಅವರ ಸಹೋದರಿಯಾಗಿದ್ದರು.

ಸಚಿವರ ಸಂತಾಪ:  ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ತಾಯಿ ಗುಣರತ್ನಾ ಶೆಟ್ಟಿ ಅವರ ನಿಧನಕ್ಕೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಭಗವಂತನು ಶಾಂತಿಯನ್ನು ನೀಡಲಿ ಹಾಗೂ ಕುಟುಂಬ ವರ್ಗಕ್ಕೆ ದು:ಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News