×
Ad

ತಿಂಗಳಿಗೆ 5 ದಿನ ಮಾತ್ರ ಕ್ರೀಡೇತರ ಚಟುವಟಿಕೆಗೆ ಅನುಮತಿ: ಹೈಕೋರ್ಟ್

Update: 2017-07-28 20:30 IST

ಬೆಂಗಳೂರು, ಜು.28: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನವನ್ನು ತಿಂಗಳಿಗೆ 5 ದಿನ ಮಾತ್ರ ಕ್ರೀಡೇತರ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದೆಂದು ಬಿಬಿಎಂಪಿ ಪರ ವಕೀಲರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಈ ಸಂಬಂಧ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನವನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿಯಲ್ಲಿ ಏನಿತ್ತು: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಕ್ರೀಡಾ ಚಟುವಟಿಕೆಗಳನ್ನು ಹೊರತುಪಡಿಸಿ ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳೇ ಹೆಚ್ಚಾಗಿ ನಡೆಯುತ್ತಿವೆ. ಇದರಿಂದ, ಶಬ್ಧಮಾಲಿನ್ಯ ಹೆಚ್ಚಳವಾಗಿ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಇನಿ್ನಲ್ಲದ ತೊಂದರೆಯಾಗುತ್ತಿದೆ.
    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News