×
Ad

ಮಾನಸಿಕ ಕಾರ್ಯಕ್ರಮಗಳ ಬಗ್ಗೆ ಅರಿವು

Update: 2017-07-28 20:43 IST

ಮಡಿಕೇರಿ, ಜು.28: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಡಾಟ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಹಾಗೂ ಕೊಡಗು ಜಿಲ್ಲೆಯಲ್ಲಿ ದೊರೆಯುತ್ತಿರುವ ಮಾನಸಿಕ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

 ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮನೋ ವೈದ್ಯರಾದ ಡಾ.ಡೆವಿನ್ ಅವರು ಭಾಗವಹಿಸಿದ್ದರು.

ಮಾನಸದಾರ ಕೇಂದ್ರದ ಸಂಯೋಜಕರಾದ ಡಾ.ರವಿಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ದೊರೆಯುತ್ತಿರುವ ಮಾನಸಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಡಾ. ಡೆವಿನ್ ಖಿನ್ನತೆಯ ಬಗ್ಗೆ ಮಾತನಾಡಿ ಪ್ರತಿ ದಿನ ಭೇಟಿ ನೀಡುವ ಸ್ಥಳಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಮಾನಸಿಕ ರೋಗಗಳ ಬಗ್ಗೆ ತಿಳಿಸಿದರು.

ಮಾನಸದಾರ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾನಸದಾರ ಕೇಂದ್ರದ ಸಂಯೋಜಕರಾದ ವಿಶ್ವನಾಥ ಸಿ.ವಿ. ಅವರು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಗ್ರೀನ್‌ಡಾಟ್ ಟ್ರಸ್ಟ್‌ನ ಕಾರ್ಯದರ್ಶಿಯಾದ ಡಾ.ಕಾಂತರಾಜು ಸಿ.ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್ ಅವರು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ದೇವರಾಜ್ ಪಿ.ಪಿ., ಪಾಲ್ಗೊಂಡಿದ್ದರು. ಹಾಗೂ ಜಿಲ್ಲೆಯ ಎಲ್ಲಾ ಯುಆರ್‌ಡಬ್ಲ್ಯು ಮತ್ತು ಎಂಆರ್‌ಡಬ್ಲ್ಯು ಸದಸ್ಯರುಗಳು ಭಾಗವಹಿಸಿದ್ದರು. ಸಿ.ವಿ.ವಿಶ್ವನಾಥ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News