×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-07-28 22:07 IST

ಬೈಂದೂರು, ಜು.28: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬೈಂದೂರಿನ ಮಹಾಕಾಳಿ ಲೇಔಟ್‌ನ ನಿವಾಸಿ ಶಾಂತಿ ಪಾಯಸ್(40) ಎಂಬ ವರು ಜೀವನದಲ್ಲಿ ಜಿಗುಪ್ಸೆಗೊಂಡು  ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ವೈಯಕ್ತಿಕ ಕಾರಣದಿಂದ ಮನನೊಂದು ಜು.20ರಂದು ಮದ್ಯ ಪಾನದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಟ್ಟಾರು ಕೆಳಬೆಂಜಾಲೆ ನಿವಾಸಿ ಶಂಕರ ಪೂಜಾರಿ(60) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News