ಮೊದಲ ಟೆಸ್ಟ್ : ಲಂಕಾದ ಗೆಲುವಿಗೆ 550 ರನ್‌ಗಳ ಸವಾಲು

Update: 2017-07-29 05:22 GMT

 ಗಾಲೆ, ಜು.29: ಇಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 17ನೆ ಟೆಸ್ಟ್ ಶತಕ ದಾಖಲಿಸಿದ್ದಾರೆ.

ಭಾರತ ಎರಡನೆ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 240 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ಶ್ರೀಲಂಕಾ ಗೆಲುವಿಗೆ 550 ರನ್‌ಗಳ ಸವಾಲು ಪಡೆದಿದೆ. ಭಾರತ ಎರಡನೆ ಇನಿಂಗ್ಸ್‌ನಲ್ಲಿ ಮೂರನೆ ದಿನದ ಆಟ ಕೊನೆಗೊಂಡಾಗ 46.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 189 ರನ್ ಗಳಿಸಿತ್ತು
 ನಾಯಕ ವಿರಾಟ್ ಕೊಹ್ಲಿ ಔಟಾಗದೆ 76 ರನ್ ಗಳಿಸಿ ಬ್ಯಾಟಿಂಗ್‌ನ್ನು ನಾಲ್ಕನೆ ದಿನಕ್ಕೆ ಕಾಯ್ದಿರಿಸಿದ್ದರು. ಮೊದಲ ಇನಿಂಗ್ಸ್‌ನಲ್ಲಿ ಭಾರತ 309 ರನ್‌ಗಳ ಮುನ್ನಡೆ ಪಡೆದಿತ್ತು.
 
ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ನಾಲ್ಕನೆ ದಿನದ ಆಟ ಮುಂದುವರಿಸಿ ನಾಲ್ಕನೆ ವಿಕೆಟ್‌ಗೆ 51 ರನ್‌ಗಳ ಜೊತೆಯಾಟ ನೀಡಿದರು. ಕೊಹ್ಲಿ ಔಟಾಗದೆ 103ರನ್ ಮತ್ತು ರಹಾನೆ ಔಟಾಗದೆ 23 ರನ್ ಗಳಿಸಿದರು
. ,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News