‘ವೈದ್ಯಕೀಯ ಕೋರ್ಸು’ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು, ಜು.29: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ-2017ನೆ ಸಾಲಿನ ಮೊದಲನೆ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
2017ನೆ ಸಾಲಿನಲ್ಲಿ ಸರಕಾರವು ನಿಗದಿಪಡಿಸಿರುವ ಸೀಟು ಮ್ಯಾಟ್ರಿಕ್ಸ್ ಅನ್ನು ಅಳವಡಿಸಿಕೊಂಡು, ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಆಪ್ಷನ್ ಅನ್ನು ಆಧರಿಸಿ ಸೀಟು ಹಂಚಿಕೆ ಮಾಡಲಾಗಿದೆ. ನಿಗದಿಪಡಿಸಿರುವ ನಾಲ್ಕು ಗಳಲ್ಲಿ ಯಾವುದಾದರೂ ಒಂದು ಅನ್ನು ಆಯ್ಕೆ ಮಾಡುವ ಮೊದಲು ಇ-ಬ್ರೋಚರ್‌ನಲ್ಲಿ ನೀಡಿರುವ ಮಾಹಿತಿಯನ್ನು ಓದಿ ಅರ್ಥ ಮಾಡಿಕೊಂಡು ಮುಂದಿನ ಸುತ್ತುಗಳಲ್ಲಿ ಭಾಗವಹಿಸಲು ನಿಗದಿಪಡಿಸಿರುವ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ ಅನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.
ವಿವರವಾದ ಹೆಚ್ಚಿನ ಸೂಚನೆಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟನ್ನು ನೋಡಬಹುದಾಗಿದೆ.
ಸಹಾಯಕ ಕೃಷಿ ನಿರ್ದೇಶಕರ ನೇಮಕಾತಿ: ಸರಕಾರದ ನಿರ್ದೇಶನದಂತೆ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ನಿರ್ದೇಶಕರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜು.29ರಂದು ನಡೆಸಲಾಗಿದೆ. ಪರೀಕ್ಷೆಯು ಎಲ್ಲ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿದೆ. ಜು.30ರಂದು ಕೃಷಿ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
ಆರ್‌ಡಿಪಿಆರ್-ಪಿಡಿಒ-ದಾಖಲಾತಿ ಪರಿಶೀಲನೆ: ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳ ನೇಮಕಾತಿ ಸಂಬಂಧ ಆ.16 ರಿಂದ 19ರವರೆಗೆ ಮೂಲದಾಖಲಾತಿಗಳ ಪರಿಶೀಲನೆಯನ್ನು ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಪರೀಕ್ಷಾ ಪ್ರಾಧಿಕಾರದಲ್ಲಿ ನಡೆಸಲಾಗುವುದು.
http://kea.kar.nic.in ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಹಾಗು ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಲಾಗಿದೆ. ಸಲ್ಲಿಸಬೇಕಾದ ಮೂಲ ದಾಖಲಾತಿಗಳ ವಿವರ ಮತ್ತು ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.