×
Ad

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Update: 2017-07-29 21:35 IST

ಉಡುಪಿ, ಜು.29: ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜು.31ರಿಂದ ಆ.5ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಭುಜನೋವಿಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಭುಜನೋವು, ಫ್ರೋಜನ್ ಶೋಲ್ಡರ್ ಹಾಗೂ ಭುಜದ ಚಲನೆ ಮಾಡಲು ಕಷ್ಟವಾಗುವ ಲಕ್ಷಣಗಳಿರುವ ರೋಗಿಗಳು ಈ ಚಿಕಿತ್ಸಾ ಶಿಬಿರದ ಪ್ರಯೋಜನ ವನ್ನು ಉಚಿತವಾಗಿ ಪಡೆಯಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News