ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ
Update: 2017-07-30 17:22 IST
ಉಡುಪಿ, ಜು.30: ಉಡುಪಿ ವಲಯ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರವು ಇತ್ತೀಚಿಗೆ ಒಳಕಾಡು ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಉಡುಪಿ ನಗರಸಭಾ ಸದಸ್ಯೆ ಗೀತಾ ರವಿ ಶೇಟ್ ಮಾತಾಡಿ, ದೈಹಿಕ ಶಿಕ್ಷಣವು ಮಕ್ಕಳಿಗೆ ಶಿಸ್ತು ಬದ್ಧ ಜೀವನವನ್ನು ಕಲಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.
ಮಂಗಳೂರು ವಿಶ್ವವಿದ್ಯಾಲದ ಸೆನೆಟ್ ಸದಸ್ಯ ಅಮೃತ್ ಶೆಣೈ ಮಾತಾಡಿ, ಮಕ್ಕಳ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಅವರ ಪಾಠ ದೈಹಿಕ ವಿಕಸನಕ್ಕೆ ಒತ್ತು ನೀಡುತ್ತದೆ. ಬೌದ್ಧಿಕ ಬುದ್ದಿ ವೃದ್ಧಿಸಲು ದೈಹಿಕ ಶಿಕ್ಷಣ ಅತೀ ಮುಖ್ಯ ಎಂದರು.
ಈ ಸಂದರ್ಭ ರಮಾನಂದ್ ಭಟ್, ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲ, ಸುದರ್ಶನ್ ನಾಯಕ್, ಮಧುಕರ್, ಸೋಮಪ್ಪ ತಿಂಗಳಾಯ ಮೊದಲಾದವರು ಉಪಸ್ಥಿತರಿದ್ದರು.