×
Ad

ಕೆಎಸ್ಸಾರ್ಟಿಸಿಗೆ ರಾಷ್ಟ್ರೀಯ ಪ್ರವಾಸ್ ಎಕ್ಸಲೆನ್ಸ್ ಪ್ರಶಸ್ತಿ

Update: 2017-07-30 17:55 IST

ಬೆಂಗಳೂರು, ಜು. 30: ಫ್ಲೈ ಬಸ್ ಸೇವೆ, ಸಣ್ಣ ಮತ್ತು ಮಧ್ಯಮ ನಗರಗಳಲ್ಲಿ ನಗರ ಸಾರಿಗೆ, ನಗರ ಸಾರಿಗೆ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನ ಅವಳಡಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಗೆ ಮೂರು ರಾಷ್ಟ್ರೀಯ ಪ್ರವಾಸ್ ಎಕ್ಸಲೆನ್ಸ್ ಪ್ರಶಸ್ತಿಗಳು ಲಭಿಸಿವೆ.

ಶನಿವಾರ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯದ ಸಾರಿಗೆ ಸಚಿವ ದಿವಾಕರ್ ರೌಟೆ, ಜಾರ್ಖಂಡ್ ರಾಜ್ಯದ ಸಾರಿಗೆ ಸಚಿವ ಸಿ.ಪಿ.ಸಿಂಗ್ ಅವರು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆಂಥೋನಿ ಜಾರ್ಜ್ ಹಾಜರಿದ್ದರು.

ಕೇಂದ್ರ ಸರಕಾರ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳಿಗೆ ಮೀಸಲಿದ್ದ ಆರು ಪ್ರಶಸ್ತಿಗಳ ಪೈಕಿ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಮೂರು ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿಯೆ ಅಗ್ರಗಣ್ಯ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಒದಗಿಸುತ್ತಿರುವ ಸಂಸ್ಥೆ ಕೆಎಸ್ಸಾರ್ಟಿಸಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News