ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್ ಮಹಾಸಭೆ
Update: 2017-07-30 18:01 IST
ವಿಟ್ಲ, ಜು. 30: ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್ ಅರ್ಧವಾರ್ಷಿಕ ಮಹಾಸಭೆಯು ಅಗ್ರಹಾರ ಮಸ್ಜಿದ್ ದಾರುಲ್ ಹಸನಾತ್‌ನಲ್ಲಿ ಇತ್ತೀಚೆಗೆ ನಡೆಯಿತು. ಸೆಕ್ಟರ್ ಅಧ್ಯಕ್ಷ ಮನ್ಸೂರ್ ವಗ್ಗ ಅಧ್ಯಕ್ಷತೆ ವಹಿಸಿದರು.
ಕೆಸಿಎಫ್ ಇಂಟರ್‌ನ್ಯಾಷನಲ್ ಸಮಿತಿ ಅಧ್ಯಕ್ಷ ಎಸ್.ಪಿ. ಉಸ್ತಾದ್ ಉದ್ಘಾಟಿಸಿದರು. ಈ ಸಂದರ್ಭ ಅವರು ಪದಾಧಿಕಾರಿಗಳ ಜವಾಬ್ದಾರಿಗಳು ಎಂಬ ವಿಷಯದಲ್ಲಿ ಮಾಹಿತಿ ಶಿಬಿರ ನಡೆಸಿಕೊಟ್ಟರು. ಡಿವಿಷನ್ ಅಧ್ಯಕ್ಷ ಅಬ್ದುಲ್ ರಶೀದ್ ವಗ್ಗ ವೀಕ್ಷಕರಾಗಿ ಆಗಮಿಸಿದರು.
ಆರು ತಿಂಗಳಿನಲ್ಲಿ ಸೆಕ್ಟರ್ ವ್ಯಾಪ್ತಿಯ ಶಾಖೆಗಳಲ್ಲಿ ಹಾಗೂ ಸೆಕ್ಟರಿನಲ್ಲಿ ನಡೆದ ಕಾರ್ಯಕ್ರಮದ ವರದಿ ಮತ್ತು ಲೆಕ್ಕ ಪತ್ರವನ್ನು ಮಂಡಿಸಿ ಸಭೆಯಲ್ಲಿ ಅನುಮೋದನೆ ನಡೆಯಲಾಯಿತು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ ಸ್ವಾಗತಿಸಿ, ಕಾರ್ಯದರ್ಶಿ ಹಬೀಬ್ ಪೆರಾಳ ವಂದಿಸಿದರು.