×
Ad

ಜಿಲ್ಲಾ ಮಟ್ಟದ ಪ್ರತಿಕಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ತನ್ವೀರ್ ಸೇಠ್

Update: 2017-07-30 19:34 IST

ರಾಯಚೂರು, ಜು.30: ನಗರದ ಲಿಂಗಸೂಗೂರುರಿನಲ್ಲಿ ಜಿಲ್ಲಾ ಮಟ್ಟದ ಪ್ರತಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಕೆಕೆಆರ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾರ್ಯನಿರತರ ಪ್ರರ್ತಕರ್ತರ ಸಂಘ, ರಾಯಚೂರು ರಿಪೋಟರ್ಸ್ ಗಿಲ್ಡ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್  ಚಾಲನೆ ನೀಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಶಾಸಕರಾದ ಮಾನಪ್ಪ ವಜ್ಜಲ್, ಎನ್.ಎಸ್.ಬೋಸರಾಜ್, ಪ್ರತಾಪ್‌ಗೌಡ ಪಾಟೀಲ್, ಸಂಸದ ಬಿ.ವಿ.ನಾಯಕ, ಜಿ.ಪಂ. ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೇರಿ ಅನೇಕರು ಭಾಗವಹಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 17 ಜನ ಪತ್ರಕರ್ತರಿಗೆ ಸನ್ಮಾನಿಸಿ ಪ್ರಶಸ್ತಿ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News