ಮಂಗಳೂರು ಘಟಕದಲ್ಲಿ ವನಮಹೋತ್ಸವ ಆಚರಣೆ
ಮಂಗಳೂರು ಜು.30: ನಗರದ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಗೃಹರಕ್ಷಕರ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷ ವೆಂಕಟೇಶ್ ಎನ್. ಬಾಳಿಗ, ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಆನಂದ್ ಅತ್ತಾವರ, ಲಯನ್ಸ್ ಕ್ಲಬ್‌ನ ಖಜಾಂಚಿ ಜಯರಾಜ್ ಪ್ರಕಾಶ್, ಲಯನೆಸ್‌ನ ಅಧ್ಯಕ್ಷ ನಾನ್ಸಿ ಮಸ್ಕರೇನಸ್ ಉಪಸ್ಥಿತರಿದ್ದರು.
ಡಾ.ಮುರಲೀ ಮೋಹನ್ ಚೂಂತಾರು ಮಾತನಾಡಿ, ದಿನದಿಂದ ದಿನಕ್ಕೆ ಕಾಡನ್ನು ಕಡಿದು ಕಾಂಕ್ರಿಟ್ ಕಟ್ಟಡವನ್ನು ನಿರ್ಮಿಸುವುದರಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಎಲ್ಲಾ ಕಟ್ಟಡದಲ್ಲೂ ಮಳೆಕೊಯ್ಲು ಕಡ್ಡಾಯವಾಗಿ ಮಾಡುವಂತೆ ಜನಜಾಗೃತಿ ಮಾಡಬೇಕು. ಎಲ್ಲಾ ಜನರೂ ತಮ್ಮಲ್ಲಿರುವ ಖಾಲಿ ಜಾಗದಲ್ಲಿ ಪ್ರತೀ ವರ್ಷ ಗಿಡವನ್ನು ನೆಟ್ಟು ಬೆಳೆಸಿ ಮರವಾಗುವಂತೆ ನೋಡಿಕೊಳ್ಳಬೇಕು ಇದರಿಂದ ನಿಜವಾದ ವನಮಹೋತ್ಸವ ಆಚರಣೆ ಮಾಡಿದಂತಾಗುತ್ತದೆ ಎಂದರು.
ಜಿಲ್ಲಾ ಗೃಹರಕ್ಷಕ ದಳ ಮಂಗಳೂರು ಘಟಕದ ಗೃಹಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.