ವೇಣೂರು: ಶೇಖ್ ಫರೀದ್ ಸಾಹೇಬ್ ನಿಧನ

Update: 2017-07-30 15:48 GMT

ವೇಣೂರು, ಜು. 30: ಇಲ್ಲಿನ ನಿವಾಸಿ, ಅರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಶೇಖ್ ಫರೀದ್ ಸಾಹೇಬ್ ಅವರು ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. 

ಬೆಳ್ತಂಗಡಿ, ನಾರಾವಿ, ವೇಣೂರು, ವಾಮದಪದವು ಅರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಫರೀದ್ ಅವರು ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಅವರ ಅಂತಿಮ ಸಂಸ್ಕಾರ ಸೋಮವಾರ ಝುಹರ್ ನಮಾಝ್ ಬಳಿಕ ವೇಣೂರಿನ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ