×
Ad

ಜು.31: ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಲೋಕಾರ್ಪಣೆ

Update: 2017-07-30 22:19 IST

ಮಂಗಳೂರು, ಜು.30: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹೊರ ತಂದ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಜು.31ರಂದು ಸಂಜೆ 4ಕ್ಕೆ ನಗರದ ಪುರಭವನದ ಡಾ. ವಹಾಬ್ ದೊಡ್ಡಮನೆ ವೇದಿಕೆಯಲ್ಲಿ ನಡೆಯಲಿದೆ.

ಮೈಸೂರು ವಿವಿ ಪ್ರಾಧ್ಯಾಪಕ ಡಾ.ಅರವಿಂದ ಮಾಲಗತ್ತಿ ಸಭಾ ಕಾರ್ಯಕಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಲೋಕಾರ್ಪಣೆ ಮಾಡಲಿರುವರು.

ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಯ್ದಿನ್ ನಿಘಂಟು ಪ್ರಥಮ ಪ್ರತಿ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭ ಸಚಿವ ಯು.ಟಿ. ಖಾದರ್ ಬೆಲ್ಕಿರಿ ವಿಶೇಷಾಂಕ ಬಿಡುಗಡೆಗೊಳಿಸಲಿದ್ದಾರೆ ಎಂದು ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News