ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

Update: 2017-07-31 10:41 GMT

ಹಾಸನ, ಜು.31: ಸ್ವತಂತ್ರ ಪದವಿಪೂರ್ವ ಕಾಲೇಜು (ವಿಜಯನಗರ) ಇಲ್ಲಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಪರಿಷತ್ (ಎಸ್‌ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ನಗರದ ಸಮೀಪ ವಿಜಯ ನಗರ ಬಡಾವಣೆಯಲ್ಲಿರುವ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಿದ್ದು, ಸುಮಾರು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೇ ಕಾಲೇಜಿನ ಕಟ್ಟಡವು ಸುಮಾರು 40 ವರ್ಷಗಳ ಹಳೆಯದಾಗಿದೆ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಡೆಸ್ಕ್, ಬೆಂಚ್, ಕ್ರೀಡಾ ಸಾಮಾಗ್ರಿಗಳು ಮುಂತಾದ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು.

ಸ್ವಂತ ಕಟ್ಟಡ ಕಾಮಗಾರಿ ಪ್ರಾರಂಭವಾಗಿ 2 ವರ್ಷಗಳು ಕಳೆದರೂ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವಲ್ಲಿ ವಿಳಂಬವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಬಯಲನ್ನೆ ಬಳಸಬೇಕಾಗಿದೆ ಎಂದು ಹೇಳಿದರು.

ಸ್ವತಂತ್ರ ಪದವಿಪೂರ್ವ ಕಾಲೇಜುಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇದೆ ವೇಳೆ ಭಾರತ ವಿದ್ಯಾರ್ಥಿ ಪರಿಷತ್ (ಎಸ್‌ಎಫ್ಐ) ಜಿಲ್ಲಾಧ್ಯಕ್ಷ ಸಿ.ಎಸ್. ಮಹೇಶ್, ಕಾರ್ಯರ್ಶಿ ಎಂ. ಆಶಾ, ರಮೇಶ್, ವಿವೇಕ್ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News