×
Ad

ಶಿವಪ್ಪ ನಿಧನಕ್ಕೆ ಸಿಎಂ ಸಂತಾಪ

Update: 2017-07-31 17:42 IST

ಬೆಂಗಳೂರು, ಜು. 31: ನೇರ ಮಾತಿಗೆ ಹೆಸರಾಗಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಬಿ.ಬಿ. ಶಿವಪ್ಪ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
                            
ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಬುನಾದಿ ಹಾಕಿದವರಲ್ಲಿ ಮಹತ್ವದ ಪಾತ್ರ ವಹಿಸಿದ್ದ ಶಿವಪ್ಪ, ಎಲ್ಲ್ಲ ಪಕ್ಷಗಳ ಪ್ರಮುಖರೊಂದಿಗೆ ಉತ್ತಮ ಸ್ನೇಹ ಹಾಗೂ ಒಡನಾಟ ಇರಿಸಿಕೊಂಡಿದ್ದ ಶಿವಪ್ಪ ವಿಧಾನಸಭೆ ಹಾಗೂ ಪರಿಷತ್‌ಎರಡೂ ಸದನಗಳಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಶಿವಪ್ಪರ ಆತ್ಮಕ್ಕೆ ಶಾಂತಿ ದೊರೆಯಲಿ. ಶ್ರೀಯುತರ ಅಗಲಿಕೆಯಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಶಿವಪ್ಪರಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಕರುಣಿಸಲಿ ಎಂದು ಸಿಎಂ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News