×
Ad

ಉಗ್ರಪ್ಪ, ಜಯಮಾಲಾ ಸೇರಿ ಐವರ ನಾಮನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2017-07-31 20:46 IST

ಬೆಂಗಳೂರು, ಜು.31: ರಾಜ್ಯ ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ವಿ.ಎಸ್. ಉಗ್ರಪ್ಪ, ಕೆ.ಅಬ್ದುಲ್ ಜಬ್ಬಾರ್, ಡಾ. ಜಯಮಾಲಾ ರಾಮಚಂದ್ರ, ಐವನ್ ಡಿಸೋಜಾ ಮತ್ತು ಇಕ್ಬಾಲ್ ಅಹಮದ್ ಸರಡಗಿ ಅವರನ್ನು ನಾಮನಿರ್ದೇಶನ ಮಾಡಿದ ರಾಜ್ಯ ಸರಕಾರ ಮತ್ತು ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಐವರ ನಾಮನಿರ್ದೇಶನ ಪ್ರಶ್ನಿಸಿ ಎಸ್.ರಾಜೇಂದ್ರನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿತು.

ರಾಜ್ಯ ಸರಕಾರವು 2014ರಲ್ಲಿ ವಿ.ಎಸ್. ಉಗ್ರಪ್ಪ, ಕೆ.ಅಬ್ದುಲ್ ಜಬ್ಬಾರ್, ಜಯಮಾಲಾ ರಾಮಚಂದ್ರ, ಐವನ್ ಡಿಸೋಜಾ ಮತ್ತು ಇಕ್ಬಾಲ್ ಅಹಮದ್ ಸರಡಗಿ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. 2014ರ ಜೂ.24ರಂದು ಸರಕಾರದ ಈ ಶಿಫಾರಸು ಮಾನ್ಯ ಮಾಡಿದ್ದ ರಾಜ್ಯಪಾಲರು, ಐವರು ಸದಸ್ಯರನ್ನು ಎಂಎಲ್‌ಸಿಯಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದರು. ಈ ಕ್ರಮ ಸಂವಿಧಾನಬಾಹಿರ. ಇವರ ನಾಮಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News