ಕೇಂದ್ರ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
Update: 2017-07-31 21:28 IST
ಬೆಂಗಳೂರು, ಜು.31: ರೇರಾ ಕಾಯ್ದೆ ಪ್ರಶ್ನಿಸಿ ಗೃಹ ನಿರ್ಮಾಣ ಸಹಕಾರಿ ಸಂಘಗಳು ಸಲ್ಲಿಸಿರುವ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಗೃಹ ನಿರ್ಮಾಣ ಸಹಕಾರಿ ಸಂಘಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಗೃಹ ನಿರ್ಮಾಣ ಸಹಕಾರಿ ಸಂಘಗಳು ನಿವೃತ್ತ ನೌಕರರು, ಹಾಲಿ ನೌಕರರು ಹಾಗೂ ಇತರರಿಗೆ ಬಡಾವಣೆ ಹಾಗೂ ವಸತಿಗಳನ್ನು ನಿರ್ಮಾಣ ಮಾಡುತ್ತದೆಯೇ ವಿನಹ ಕಾಪೂರೇಟ್ ಉದ್ದೇಶಕ್ಕಾಗಿ ನಿರ್ಮಾಣ ಮಾಡುವುದಿಲ್ಲ. ಹೀಗಾಗಿ, ಕೇಂದ್ರ ಸರಕಾರ ಜಾರಿಗೆ ತಂದಿರುವ ರೇರಾ ಕಾಯ್ದೆ-2016ಕ್ಕೆ ತಡೆ ನೀಡಬೇಕು ಎಂದು ಪೀಠಕ್ಕೆ ತಿಳಿಸಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತು.