×
Ad

ಕಾವ್ಯಾ ಪ್ರಕರಣ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲು

Update: 2017-07-31 22:16 IST

ಮಂಗಳೂರು, ಜು. 31: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಪ್ರೇರಣೆಯಿಂದ ದೂರನ್ನು ದಾಖಲಿಸಿಕೊಂಡಿದ್ದು, 3 ಮಂದಿಯ ಸಮಿತಿಯನ್ನು ರಚಿಸಿ 15 ದಿನದೊಳಗೆ ವರದಿ ಸಲ್ಲಿಸಲು ನಿರ್ದೇಶನ ನೀಡಿದೆ.

ಕಾವ್ಯಾ ಸಾವಿನ ಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಆಯೋಗದ ಸದಸ್ಯರಾದ ಆನಂದ ಬಿ. ಲೋಬೊ, ಡಾ. ವನಿತಾ ಎನ್. ತೊರವಿ, ಕೆ.ಬಿ. ರೂಪಾನಾಯ್ಕ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಆ.2ರಂದು ಜಿಲ್ಲೆಗೆ ಆಗಮಿಸಲಿದ್ದು, ಪ್ರಕರಣದ ಕುರಿತು ತನಿಖೆ ನಡೆಸಿ, ಸ್ಥಳ ಪರಿಶೀಲನೆ ನಡೆಸಲಿದೆ. ಸಮಿತಿಯು 15 ದಿನದೊಳಗೆ ವರದಿ ಸಲ್ಲಿಸಬೇಕೆಂದು ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News